ಕುಂದಾಪುರ: (ಸೆ:2)
ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರಕ್ಕೆ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಭೇಟಿ ಇತ್ತು ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ಉಡುಪಿ ಶ್ರೀಕೃಷ್ಣ ಮಠದಲ್ಲಿ ಜರಗುತ್ತಿದ್ದ ಶ್ರೀಕೃಷ್ಣ ಮಾಸೋತ್ಸವದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಕೊಲ್ಲೂರಿಗೆ ಭೇಟಿ ಇತ್ತಾಗ ಕ್ಷೇತ್ರದ ಆಡಳಿತಾಧಿಕಾರಿ ಕೆ. ಮಹೇಶ್ಚಂದ್ರ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಬಳಿಕ ವಿಶೇಷ ಪೂಜೆಗಳನ್ನು ನಡೆಸಲಾಯಿತು.
“ದೇವರಿಗೆ ಯಾವ ಭಾಷೆಯಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸುತ್ತೇವೆ ಎನ್ನುವುದಕ್ಕಿಂತ ಯಾವ ಭಾವದಿಂದ ಸಲ್ಲಿಸುತ್ತೇವೆ ಎನ್ನುವುದೇ ಮುಖ್ಯ. ನಮ್ಮ ಧರ್ಮದಲ್ಲಿ ವ್ಯತ್ಯಾಸಗಳಿರಬಹುದು. ಆದರೆ ನಮ್ಮ ದೇಶ, ಭಾವ, ಭಕುತಿ, ಸಂಸ್ಕೃತಿ ಒಂದೇ ಆಗಿದೆ. ವೈವಿಧ್ಯತೆ ನಮ್ಮ ವೈಶಿಷ್ಠ್ಯ. ಅದರಿಂದಲೇ ನಾವು ಸುಖವಾಗಿದ್ದೇವೆ” ಎಂದರು.ಉಡುಪಿ ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠದ ವತಿಯಿಂದ ನಡೆದ ಶ್ರೀಕೃಷ್ಣ ಮಾಸೋತ್ಸವದಲ್ಲಿ ಪಾಲ್ಗೊಂಡ ರಾಜ್ಯಪಾಲರನ್ನು ಶ್ರೀಮಠದ ವತಿಯಿಂದ ಗೌರವಿಸಲಾಯಿತು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀ ಸುಶೀಂದ್ರ ಶ್ರೀಪಾದರು, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೊದಲಾದವರಿದ್ದರು.
ಉಡುಪಿ, ಕೊಲ್ಲೂರಿಗೆ ಕೇರಳ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ದರ್ಶನ
76