ಜ್ಞಾನ ಸಂಪನ್ನ ಹಿರಿಯರನ್ನು ಕಳೆದುಕೊಂಡರೆ ಗ್ರಂಥಾಲಯ ಕಳೆದುಕೊಂಡಂತೆ: ಡಾ. ತುಕಾರಾಮ ಪೂಜಾರಿ

by Narayan Chambaltimar

 

ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿರಿಯರಿಂದ ನಾವು ಕೇಳಿದ ಮತ್ತು ಪಡೆದ ಮಾಹಿತಿ ಈಗಲೂ ಮಾರ್ಗದರ್ಶಕವೆನಿಸುತ್ತದೆ. ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಪರಿತಪಿಸುವುದನ್ನು ನಾವು ಕಾಣುತ್ತೇವೆ. ಆದುದರಿಂದ ಜ್ಞಾನಸಂಪನ್ನ ಹಿರಿಯರೊಬ್ಬರನ್ನು ನಾವು ಕಳೆದುಕೊಂಡರೆ ಒಂದು ಗ್ರಂಥಾಲಯವೇ ನಾಶವಾದಂತೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾ. ತುಕಾರಾಮ ಪೂಜಾರಿ ತಿಳಿಸಿದರು.ಅವಿಭಕ್ತ ಕುಟುಂಬ ಪದ್ಧತಿಯಲ್ಲಿ ಹಿರಿಯರಿಂದ ನಾವು ಕೇಳಿದ ಮತ್ತು ಪಡೆದ ಮಾಹಿತಿ ಈಗಲೂ ಮಾರ್ಗದರ್ಶಕವೆನಿಸುತ್ತದೆ. ಇಂದಿನ ಯುವಜನಾಂಗಕ್ಕೆ ತಾಳ್ಮೆಯ ಕೊರತೆ ಇದ್ದು ಹಿರಿಯರ ಸೂಚನೆಗಳನ್ನು ನಿರ್ಲಕ್ಷ್ಯ ಮಾಡಿ ಪರಿತಪಿಸುವುದನ್ನು ನಾವು ಕಾಣುತ್ತೇವೆ. ಆದುದರಿಂದ ಜ್ಞಾನಸಂಪನ್ನ ಹಿರಿಯರೊಬ್ಬರನ್ನು ನಾವು ಕಳೆದುಕೊಂಡರೆ ಒಂದು ಗ್ರಂಥಾಲಯವೇ ನಾಶವಾದಂತೆ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಸ್ಥಾಪಕ ಡಾ. ತುಕಾರಾಮ ಪೂಜಾರಿ ತಿಳಿಸಿದರು.

ಬಂಟ್ವಾಳದ ಸಂಚಯಗಿರಿಯಲ್ಲಿರುವ ಅಧ್ಯಯನ ಕೇಂದ್ರದಲ್ಲಿ ಜರಗಿದ
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ )ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾದ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್ ಮಾತನಾಡಿ ಪ್ರತಿಷ್ಠಾನದ ವತಿಯಿಂದ ಸಹಕಾರಿ ಸಂಘದ ಸ್ಥಾಪನೆ,ಮೂರನೇ ವಾರ್ಷಿಕೋತ್ಸವ,ತಾಲೂಕು ಸಮಿತಿಗಳ ನವೀಕರಣ, ಕೇಂದ್ರ ಸಮಿತಿಯ ಸಭೆಯಲ್ಲಿ ಭಾಗವಹಿಸಲು ಪ್ರತಿನಿಧಿಗಳನ್ನು ಗುರುತಿಸುವ ಬಗ್ಗೆ ಮಾಹಿತಿ ನೀಡಿದರು.

ಡಾ. ತುಕಾರಾಮ ಪೂಜಾರಿ ಅವರನ್ನು ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು. ಹಿರಿಯ ಸದಸ್ಯರಾದ ಸೀತಾರಾಮ ಕೆ ಸಾಲೆತ್ತೂರು ಪ್ರತಿಷ್ಠಾನಕ್ಕೆ ನೀಡಿದ ಕೊಡುಗೆಗಾಗಿ ಗೌರವಿಸಲಾಯಿತು

ತುಳು ಅದ್ಯಯನ ಕೇಂದ್ರದ ವಸ್ತು ಸಂಗ್ರಹಾಲಯದ ಬಗ್ಗೆ ಸಮಗ್ರ ಮಾಹಿತಿಯನ್ನು ಪ್ರತಿಷ್ಠಾನದ ಸದಸ್ಯರಿಗೆ ತುಕಾರಾಮ ಪೂಜಾರಿಯವರು ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷರಾದ ಕಾಂತಾಡಿ ಸೀತಾರಾಮ ಶೆಟ್ಟಿ,
ಪ್ರತಿಷ್ಠಾನದ ಪದಾಧಿಕಾರಿಗಳಾದ ಡಾ. ಬಿ. ಯನ್ ಮಹಾಲಿಂಗ ಭಟ್, ಜಯರಾಮ ಪೂಜಾರಿ, ಗಣೇಶ್ ಭಟ್ ಕುತ್ರೋಟ್ಟು, ಸೀತಾರಾಮ ಶೆಟ್ಟಿ ಉಜಿರೆ, ಭವಾನಿ ಶಂಕರ ಶೆಟ್ಟಿ, ಪುತ್ತೂರು, ಚಂದ್ರಶೇಖರ ಆಳ್ವ ಪಡುಮಲೆ, ಉದಯಶಂಕರ ರೈ ಪುಣಚ ಮೊದಲಾದವರು ಉಪಸ್ಥಿತರಿದ್ದರು.

ಬಾಲಕೃಷ್ಣ ನಾಯಕ ಕೋಕಳ ಪ್ರಾರ್ಥಿಸಿದರು. ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಉಪಾಧ್ಯಕ್ಷರಾದ ಲೋಕೇಶ್ ಹೆಗ್ಡೆ ಪುತ್ತೂರು ಸ್ವಾಗತಿಸಿ ಎಂ. ಜಯರಾಮ ಭಂಡಾರಿ ಧರ್ಮಸ್ಥಳ ವಂದಿಸಿದರು ಸಹ ಸಂಚಾಲಕ ಭಾಸ್ಕರ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.

 

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00