ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ರಾಜಾಂಗಣದಲ್ಲಿ ಡಸಂಬರ್ 16.17.18.19 ರಂದು ಜರಗಲಿರುವ ಕೋಟಿ ಪಂಚಾಕ್ಷರಿ ಜಪ ಯಜ್ಞದ ಆಮಂತ್ರಣ ಪತ್ರಿಕೆ ಬಿಡುಗಡೆ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಹಾಗೂ ಕ್ಷೇತ್ರ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಿದರು.
ಕಾರ್ಯಕ್ರಮಕ್ಕೆ ಮೊದಲು ಶ್ರೀ ವೆಂಕಟ್ರಮಣ ಬಾಲಗೋಕುಲದ ಮಕ್ಕಳಿಂದ ಪ್ರಾರ್ಥನೆ ಹಾಡಿದರು ಸಭೆಯ ಅಧ್ಯಕ್ಷತೆಯನ್ನು ಡಾ| ಅನಂತ ಕಾಮತ್ ವಹಿಸಿ ಉದ್ಯಮಿ ಶ್ರೀ ರಾಮ್ ಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರದ ಕಾರ್ಯ ನಿರ್ವಾಹಣಾಧಿಕಾರಿ ಶ್ರೀ ಟಿ. ರಾಜೇಶ್, ಆಡಳಿತ ಸಮಿತಿ ಅಧ್ಯಕ್ಷ ಅಡ್ವ.ಗೋವಿಂದನ್ ನಾಯರ್, ಯಜ್ಞ ಸಮಿತಿ ಉಪಾಧ್ಯಕ್ಷೆ ಮೀರಾ ಕಾಮತ್ ಉಪಸ್ಥಿತರಿದ್ದರು.
ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ ಸ್ವಾಗತಿಸಿ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ್ ಕೆ.ಆರ್ ಧನ್ಯವಾದ ನೀಡಿ ಶ್ರೀ ದೇವದಾಸ ನುಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.