ಕೇರಳ ಪ್ರಾಂತ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ರಾಜ್ಯ ಸಮ್ಮೇಳನ ಕಾಸರಗೋಡು ನಗರಸಭೆ ಕಾನ್ಸರೆನ್ಸ್ ಸಭಾಂಗಣದಲ್ಲಿ ಜ.10 ಹಾಗೂ 11ರಂದು ನಡೆಯಲಿದೆ ಎಂದು ಸಂಘಟನೆ ರಾಜ್ಯ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ರಾಜ್ಯ ಸಮ್ಮೇಳನದ ಅಂಗವಾಗಿ ಜ. 10ರಂದು ಬೆಳಗ್ಗೆ 9ಕ್ಕೆ ಬೀರಂತಬೈಲು ಕನ್ನಡ ಅಧ್ಯಾಪಕ ಭವನ ದಿಂದ ಭವ್ಯ ಮೆರವಣಿಗೆನಗರಸಭಾಂಗಣದವರೆಗೆ ನಡೆಯಲಿದ್ದು, ಬಳಿಕ ಸಮ್ಮೇಳನದ ಉದ್ಘಾಟನೆ ನಡೆಯಲಿದೆ.
ಸಮ್ಮೇಳನವನ್ನು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಉದ್ಘಾಟಿಸುವರು. ಕೇರಳ ಪ್ರಾಂತ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ. ಅಧ್ಯಕ್ಷತೆವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನ ಮರದ ವಿಶೇಷ ಅತಿಥಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಉದುಮ ಶಾಸಕ ಸಿ.ಎಚ್. ಕುಂಞಂಬು ಮುಖ್ಯ ಅತಿಥಿಯಾಗಿ ಭಾಗವಹಿಸು ವರು. ಖ್ಯಾತ ಅಂಕಣಕಾರ, ಚಿಂತಕ ಮಹಾಬಲೇಶ್ವರ ರಾವ್ ಪ್ರಧಾನ ಭಾಷಣ ಮಾಡುವರು.ಮಧ್ಯಾಹ್ನ ಬಳಿಕ ನಾನಾ ವಿಷಯಗಳ ಬಗ್ಗೆ ವಿಚಾರಗೋಷ್ಠಿ ನಡೆಯಲಿದೆ. 3.30ಕ್ಕೆ ಅಧ್ಯಾಪಕರಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.
ಜ. 11ರಂದು ಬೆಳಗ್ಗೆ 9.30ಕ್ಕೆ ಸೇವೆಯಿಂದ ನಿವೃತ್ತರಾಗಲಿರುವ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ. ವಿಶ್ರಾಂತ ಉಪನ್ಯಾಸಕ ಶಿಕಾರಿಪುರ ಕೃಷ್ಣಮೂರ್ತಿ ಸಮಾರಂಭ ಉದ್ಘಾಟಿಸುವರು. ಸಂಘಟನೆ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ ಅಧ್ಯಕ್ಷತೆ ವಹಿಸುವರು.
.ಮಧ್ಯಾಹ್ನ 1.30ಕ್ಕೆ ಪ್ರತಿನಿಧಿ ಸಮ್ಮೇಳನ ನಡೆಯಲಿದೆ. ಸಂಜೆ 3ಕ್ಕೆ ನಡೆಯುವ ಸಮಾರೋಪದಲ್ಲಿ ಸಂಘಟನೆ ರಾಜ್ಯ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ. ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ. ಕೆ.ಎಂ. ಆಶ್ರಫ್ ಸಮಾರೋಪ ಕಾಠ್ಯಕ್ರಮ ಉದ್ಘಾಟಿಸುವರು. ಕಾಸರಗೋಡು ಎಸ್‌ಪಿ ಶಿಲ್ಪಾ ಡಿ. ಹಾಗೂ ಕಾಸರಗೋಡು ನಗರಸಭೆ ಅಧ್ಯಕ್ಷ ಅಬ್ಬಾಸ್ ಬೀಗಂ ಮುಖ್ಯ ಅತಿಥಿಗಳಾಗಿ ಭಾಗ ವಹಿಸುವರು. ಈ ಸಂದರ್ಭ ನಾನಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹು ಮಾನ ವಿತರಣೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಪ್ರದೀಪ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಎಂ., ಜಯರಾಮ ಸಿ.ಎಚ್, ಸುಕೇಶ್ ಎ., ವಿಜಯ ಕುಮಾರಿ ಬಿ., ಪೂರ್ಣಿಮಾ ಎಂ., ವಿನೋದ್ ರಾಜ್ ಉಪಸ್ಥಿತರಿದ್ದರು.