- ಸಿಪಿಐಎಂ ತ್ಯಜಿಸಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಂಗಲ್ಪಾಡಿ ಪಂ.ನ ಪ್ರಮುಖರಿಗೆ ಕಾಂಗ್ರೆಸ್ ನಲ್ಲಿ ಸ್ಥಾನ ಮಾನ
- ಡಿ.ಸಿ.ಸಿ.ಅಧ್ಯಕ್ಷರ ಆದೇಶ
ಮಂಗಲ್ಪಾಡಿ ಪಂಚಾಯತಿನಲ್ಲಿ ಎಡಪಕ್ಷ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸಿಪಿಐಎಂನ ಹಿರಿಯ ನಾಯಕರುಗಳಿಗೆ ಕಾಂಗ್ರೆಸ್ ಪಕ್ಷದ ಜವಾಬ್ದಾರಿಯುತ ಸ್ಥಾನಮಾನ ನೀಡಿ ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ
ಪಿ ಕೆ ಫೈಸಲ್ ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಗೆ ಆಗಮಿಸಿದ ಫಾರೂಕ್ ಶಿರಿಯ ರನ್ನು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹುದ್ದೆಗೆ, ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಮುಟ್ಟಂ, ಮಂಗಲ್ಪಾಡಿ ಮಂಡಲ ಉಪಾಧ್ಯಕ್ಷರನ್ನಾಗಿ ಅಶ್ರಫ್ ಮುಟ್ಟಂ, ಪ್ರಧಾನ ಕಾರ್ಯದರ್ಶಿಗಳಾಗಿ ಶಿಯಾಬುದ್ದೀನ್ ಎಂ ಕೆ, ಜಾವೇದ್ ಮುಟ್ಟಂ, ಕುಂಬ್ಳೆ ಮಂಡಲ ಕಾರ್ಯದರ್ಶಿಯಾಗಿ ಲತೀಫ್ ಪಿ ಕೆ ನಗರ್ ಎಂಬವರನ್ನು ಆಯ್ಕೆ ಮಾಡಲಾಗಿದೆಯೆಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಸುದೀರ್ಘ ಕಾಲ ಸಿಪಿಎಂ ಹಾಗೂ ಅದರ ಮುಂಚೂಣಿ ಸಂಘಟನೆಗಳಲ್ಲಿ ಕ್ರಿಯಾಶೀಲರಾಗಿ ದುಡಿದಿದ್ದ ಇವರು ನಂತರ ಪಕ್ಷದ ಸೈದ್ಧಾಂತಿಕ ನಿಲುವುಗಳಲ್ಲಿನ ಬದಲಾವಣೆ ವಿರೋಧಿಸಿ ಪಕ್ಷ ತ್ಯಜಿಸಿದ್ದರು. ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆ ಎಸ್ ಹಾಗೂ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಡಿ ಎಂ ಕೆ ಯವರ ಪ್ರಯತ್ನಗಳ ಫಲಶ್ರುತಿಯಾಗಿ ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.