39
ದೆಹಲಿ : ಪೋಕ್ಸೋ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಕರ್ನಾಟಕ ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್ ಟಿ ಎಸ್ ವಿಶೇಷ ನ್ಯಾಯಾಲಯ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ವಿಧಿಸಿದೆ.

ಪ್ರಕರಣದ ಆರೋಪಿಗಳಾದ ಬಿ. ಎಸ್. ವೖ, ವೖ. ಎಂ. ಅರುಣ, ಎಂ. ರುದ್ರೇಶ ಹಾಗೂ ಜಿ. ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ ವಿಶೇಷ ನ್ಯಾಯಾಲಯವು ಡಿ. 2ರಂದು ಕೋರ್ಟಿಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.
ಇದಕ್ಕೆ ತಡೆಯಾಜ್ಞೆ ದೊರಕಿದ್ದು, ಸದ್ಯ ಬಿ. ಎಸ್. ವೖ ರಿಲೀಫಾಗಿದ್ದಾರೆ.







