ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಾರ್ಯಕರ್ತರಿಂದ ಕಣಿಪುರ ಕ್ಷೇತ್ರ ಸ್ವಚ್ಛತಾ ಕಾರ್ಯಕ್ರಮ

by Narayan Chambaltimar

​ಕುಂಬಳೆ (ಆ13):
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್ ರಿ .) ಮಂಜೇಶ್ವರ ತಾಲೂಕು, ಕುಂಬಳೆ ವಲಯದ ಕಂಚಿಕಟ್ಟೆ ಒಕ್ಕೂಟದ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ವತಿಯಿಂದ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


​ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ಅಭಿಯಾನ ದ ಪ್ರಯುಕ್ತ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಮಾದರಿಯಾಗಿ ನಿರ್ವಹಿಸಲಾಯಿತು.
​ಈ ಸಂದರ್ಭದಲ್ಲಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಪ್ರಮುಖರಾದ ಪ್ರವೀಣ್, ಜಯಕೃಷ್ಣ ಹಾಗೂ ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದು, ಸ್ವಸಹಾಯ ಸಂಘಗಳ ಸದಸ್ಯರ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00