ಅಯೋಧ್ಯೆ ರಾಮ ಮಂದಿರದ ಮೊದಲ ಸಿಇಒ ಆಗಿ ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರಾ ನೇಮಕ

by Narayan Chambaltimar

ಲಖನೌ(ಸೆ. 2):
ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ನಡೆದ ದೇಣಿಗೆ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್ ಗೆ ಹೊಸ ಕಾರ್ಯ ನಿರ್ವಹಣಾಧಿಕಾರಿಯಾಗಿ (ಸಿಇಒ) ನಿವೃತ್ತ ಏರ್ ಮಾರ್ಷಲ್ ಜಿತೇಂದ್ರ ಮಿಶ್ರ ಅವರನ್ನು ನೇಮಿಸಲಾಗಿದೆ.
ರಾಮ ಮಂದಿರ ಟ್ರಸ್ಟ್ ಸಿಇಒ ಹುದ್ದೆಗೆ ಸುಮಾರು 5,200ಕ್ಕೂ ಅಧಿಕ ಅರ್ಜಿಗಳು ಬಂದಿದ್ದು, ಇದರಿಂದ 20 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆರಿಸಿ, ಅದರಿಂದ ಜಿತೇಂದ್ರ ಮಿಶ್ರಾ ಆಯ್ಕೆ ನಡೆಯಿತು.

ಭಾರತೀಯ ವಾಯುಪಡೆಯಲ್ಲಿ ಹಲವಾರು ವರ್ಷ ಕಮಾಂಡಿಂಗ್ ಹುದ್ದೆಗಳನ್ನು ನಿರ್ವಹಿಸಿದ್ದ ಮಿಶ್ರಾ ಅವರು ಆಪರೇಷನ್ ಸಿಂಧೂರ್ ಸಮಯದಲ್ಲಿ ಪಶ್ಚಿಮ ಕಮಾಂಡ್ ನ ಮುಖ್ಯಸ್ಥರಾಗಿದ್ದರು.
ರಾಮಮಂದಿರ ದೇಣಿಗೆ ಕಳವು ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಪ್ರಕರಣ ಭಾರೀ ವಿವಾದವಾದ ಹಿನ್ನೆಲೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್ಗೆ ಕಾರ್ಯ ನಿರ್ವಹಣಾಧಿಕಾರಿ ನೇಮಕ ಮಾಡಲಾಗುವುದೆಂದು ಘೋಷಿಸಲಾಗಿತ್ತು.

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00