ಕುಂಬಳೆ: ಧ. ಗ್ರಾ ಯೋಜನೆ ಆಶ್ರಯದಲ್ಲಿ ಕಳತ್ತೂರಿ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮಾಹಿತಿ

by Narayan Chambaltimar

​ಕುಂಬಳೆ( ಸೆ. 2):
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಕುಂಬಳೆ ವಲಯ, ಮಂಜೇಶ್ವರ ತಾಲೂಕು ಘಟಕದ ಆಶ್ರಯದಲ್ಲಿ ಕಳತ್ತೂರಿನ ಎ.ಎಸ್‌.ಬಿ.ಎಸ್. ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
​ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರು ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಮತ್ತು ಗಿಡ-ಮರಗಳ ಪ್ರಾಮುಖ್ಯತೆಯ ಕುರಿತು ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
​ಈ ಸಂದರ್ಭದಲ್ಲಿ ಮಂಜೇಶ್ವರ ತಾಲೂಕಿನ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಮಂಜುನಾಥ ಆಳ್ವ, ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ಆಚಾರ್, ಜನಜಾಗೃತಿ ವಲಯ ಅಧ್ಯಕ್ಷ ಮಹೇಶ್ ಪುಣಿಯೂರು, ಯೋಜನೆ ಮೇಲ್ವಿಚಾರಕ ಅಭಿಷೇಕ್, ಕೃಷಿ ಮೇಲ್ವಿಚಾರಕ ಗಿರೀಶ್, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00