ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ ಅ. 10ರಂದು ಕಡಂಬಾರ್ ನಲ್ಲಿ ನಡೆಸಲು ನಿರ್ಧಾರ

by Narayan Chambaltimar

ಉಪ್ಪಳ (ಸೆ. 11)
ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನವು ಅಕ್ಟೋಬರ್ 10 ರಂದು ಸರಕಾರಿ ಪ್ರೌಢ ಶಾಲೆ ಕಡಂಬಾರ್ ನಲ್ಲಿ ಜರಗಲಿದೆ.

ಇದರ ಪೂರ್ವಭಾವಿ ಮಂಜೇಶ್ವರ ಉಪಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ಉಪಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕೊಡ್ಲಮೊಗರು ಅವರ ಅಧ್ಯಕ್ಷತೆಯಲ್ಲಿ ಉಪ್ಪಳದ ಕೈಕಂಬ ಪಂಚಮಿ ಸಭಾಂಗಣದಲ್ಲಿ ಜರಗಿತು.

ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಸುಕೇಶ್, ಉಪಾಧ್ಯಕ್ಷ ಉಮೇಶ್ ಬಾಯಾರ್, ಕಾರ್ಯದರ್ಶಿ ಜಯಪ್ರಶಾಂತ್ ಪಾಲೆಂಗ್ರಿ , ಸದಸ್ಯರಾದ ಶ್ರೀರಾಮ್ ಕೆದುಕೋಡಿ ,ಚಂದ್ರಿಕಾ ಬಾಕ್ರಬೈಲ್, ಮಂಗಲ್ಪಾಡಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಇಸ್ಮಾಯಿಲ್, ಉಪಜಿಲ್ಲಾ ಜತೆ ಕಾರ್ಯದರ್ಶಿಗಳಾದ ಅಶ್ರಫ್ ಮರ್ಥ್ಯ, ಜಯಪ್ರಸಾದ್ ಪೆರ್ಮುದೆ, ಕಡಂಬಾರ್ ಶಾಲೆಯ ಮುಖ್ಯೋಪಾಧ್ಯಾಯ ಹರೀಶ್ ಕುಮಾರ್ ಕಡಂಬಾರ್, ಕಾರ್ಯಕಾರಿ ಸಮಿತಿ ಸದಸ್ಯರ ನಿಶಿತ್ ಐಲ ಮೊದಲಾದವರು ಉಪಸ್ಥಿತರಿದ್ದರು.

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00