ಕುಂಬಳೆ: ಕೊಡ್ಯಮೆ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

by Narayan Chambaltimar

​ಕುಂಬಳೆ (ಅ. 8):
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ, ಕುಂಬಳೆ ವಲಯದ ಕೊಡ್ಯಮೆ ಸರಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
​ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕುಂಬಳೆಯ ಸಿವಿಲ್ ಅಬಕಾರಿ ಅಧಿಕಾರಿ ಪ್ರಜಿತ್ ಟಿ ಅವರು ದುಶ್ಚಟಗಳ ದುಷ್ಪರಿಣಾಮಗಳು ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಉಪಯುಕ್ತ ಮಾಹಿತಿ ನೀಡಿದರು.

​ ಶಾಲಾ ಮುಖ್ಯೋಪಾಧ್ಯಾಯ ಪ್ರದೀಪ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂಬಳೆ ವಲಯದ ಅಧ್ಯಕ್ಷ ಮಹೇಶ್ ಪುಣಿಯೂರು, ವಲಯ ಮೇಲ್ವಿಚಾರಕ ಅಭಿಷೇಕ್, ಸೇವಾಪ್ರತಿನಿಧಿ ಸಂಧ್ಯಾ ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು

You may also like

Are you sure want to unlock this post?
Unlock left : 0
Are you sure want to cancel subscription?
-
00:00
00:00
Update Required Flash plugin
-
00:00
00:00